ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ, ಸೌಲಭ್ಯಗಳನ್ನು ನೀಡುತ್ತಿರುವುದನ್ನು ಖಂಡಿಸಿ ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಹಾಗೂ ಗೃಹ ಕಚೇರಿ ಕೃಷ್ಣಾ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ವಿವ್ಧ ಸವಲತ್ತುಗಳು ಲಭ್ಯವಾಗುತ್ತಿವೆ. ಮೊಬೈಲ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಪ್ರತಿಭಟನಿಸುತ್ತಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿ, ಗೃಹ ಕಚೇರಿ ಕೃಷ್ಣಾ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.
