ಶಿವಮೊಗ್ಗ : ಬ್ಯಾಂಕ್ ನ ಅಧಿಕಾರಿಯೋರ್ವ ತನ್ನ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ನಗರದ ಬ್ಯಾಂಕ್ ವೊಂದರ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಬ್ಯಾಂಕಿನ ವ್ಯವಹಾರದ ಕುರಿತು ಮೀಟಿಂಗ್ ಇದೆ ಎಂದು ಶಿವಮೊಗ್ಗದ ಹೋಟೆಲ್ ಒಂದಕ್ಕೆ ಕರೆಸಿಕೊಂಡು ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ದಾಖಲಾದ ಈ ಪ್ರಕರಣ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
