BREAKING : ‘RSS’ ನಿಂದ ತ್ರಿವಣ ಧ್ವಜಕ್ಕೆ ಅವಮಾನ : ಸಚಿವ ‘ಪ್ರಿಯಾಂಕ್ ಖರ್ಗೆ’ ಗಂಭೀರ ಆರೋಪ.!

ಬೆಂಗಳೂರು :   RSS ತ್ರಿವಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

 ಆರ್ ಎಸ್ ಎಸ್ ತನ್ನ 100 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಏನಿದು ಆರೋಪ..ಪ್ರಿಯಾಂಕ್ ಖರ್ಗೆ ಪೋಸ್ಟ್ ನಲ್ಲೇನಿದೆ..?

ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು.ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳು.ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು.ರಾಷ್ಟ್ರ-ವಿರೋಧಿಯಾಗಿ 100 ವರ್ಷಗಳು.ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ 24, 1948 ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ.

ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್ ಮಾಡಿದ ನಿರ್ಲಜ್ಜ ದ್ರೋಹದ ನಿದರ್ಶನಗಳಿಂದ ತುಂಬಿದೆ. ಮತ್ತು ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ, ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ.

ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read