BREAKING : ಸಾರ್ವಜನಿಕರನ್ನ ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸಬೇಡಿ : ಅಧಿಕಾರಿಗಳಿಗೆ ‘CM ಸಿದ್ದರಾಮಯ್ಯ’ ಖಡಕ್ ವಾರ್ನಿಂಗ್.!

ಮೈಸೂರು : ಸಾರ್ವಜನಿಕರನ್ನ ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆಡಿಪಿ ) ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇಂದಿನ ಸಭೆಗೆ ಗೈರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. * ಜನರನ್ನು ಅವರ ಕೆಲಸಗಳಿಗಾಗಿ ಅನಗತ್ಯ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಇದು ಅಕ್ಷಮ್ಯ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸಬಾರದು. ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು ವರದಿ ನೀಡಬೇಕು. * ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಇಲ್ಲಿನ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಹೇಗಿದೆ ಎಂಬುದನ್ನು ತೋರಿಸುತ್ತದೆ. * ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು. * ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಳಿಸಿದ್ದಕ್ಕಾಗಿ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು. * ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗದಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ನೀಡಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ. * ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು. * ಮೈಸೂರಿನ ಜನತೆ ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗಾಗಿ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುವ ಅಗತ್ಯ ಇರುತ್ತಿರಲಿಲ್ಲ. “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ. * ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ಹಿಂದೆ ನೀಡಿದ್ದ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್ಪೆಕ್ಟರ್ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ.

ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ, ವರದಿ ಬಂದಿಲ್ಲ. * ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ನಿರಂತರವಾಗಿ ಪರಿಶೀಲನೆ ನಡೆಸಬೇಕು. * ಜಿಲ್ಲೆಗೆ ಹೊಸದಾಗಿ ಡಿಡಿಪಿಐ ಬಂದಿದ್ದಾರೆ. ಈ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತಾ ಇರುತ್ತೇನೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿಕೊಳ್ಳಿ. * ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read