ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ವಿಡಿಯೋ ವೈರಲ್ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಓರ್ವ ಜೈಲಾಧಿಕಾರಿಯನ್ನು ವರ್ಗಾವಣೆ ಮಾಅಡಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಇನ್ಮುಂದೆ ಜೈಲುಗಳ ಮೇಲೆ ನಿಗಾ ವಹಿಸಲು ಕಮಾಂಡ್ ಸೆಂಟರ್ ಗಳ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. 15 ದಿನಗಳಲ್ಲಿ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಲಿದೆ.
ಜೈಲಿನ ಚಲನವಲನಗಳ ಮೇಲೆ ಎಡಿಜಿಪಿ ನಿಗಾ ವಹಿಸಲಿದ್ದಾರೆ. ಜೈಲಿನಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಗಳು ನಡೆಯದಂತೆ ಕಟ್ಟೆಚ್ಚರವಹಿಸಲಾಗುವುದು ಎಂದರು.
