ಬೆಂಗಳೂರು : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಗಗನ್ ರಾವ್ ಎಂಬ ವ್ಯಕ್ತಿ ಸೂಸೈಡ್ ಮಾಡಿಕೊಂಡಿದ್ದಾರೆ. ಇವರು ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.
ಗಗನ್ ಗೆ ಕಳೆದ 8 ತಿಂಗಳಷ್ಟೇ ಮೇಘನ ಜಾದವ್ ಜೊತೆ ಮದುವೆಯಾಗಿತ್ತು. ಮೊದಲು ಎಲ್ಲವೂ ಚೆನ್ನಾಗಿತ್ತು. ಆದರೆ ಬರು ಬರುತ್ತಾ ಪತಿ ಪತ್ನಿ ನಡುವೆ ಜಗಳ ಶುರುವಾಗಿದೆ. ಜಗಳದಿಂದ ತೀವ್ರ ನೊಂದಿದ್ದ ಗಗನ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಯ ಕಿರುಕುಳವೇ ಗಗನ್ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಮೃತನ ತಂಗಿ ದೂರು ದಾಖಲಿಸಿದ್ದಾರೆ. ಗಗನ್ ಸಾಯುವ ಹಿಂದಿನ ರಾತ್ರಿ ಪತಿ ಪತ್ನಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸತ್ತು ಗಗನ್ ನೇಣಿಗೆ ಶರಣಾಗಿದ್ದಾರೆ ಎಂದು ಗಗನ್ ಪೋಷಕರು ಆರೋಪಿಸಿದ್ದಾರೆ. ಅದೇನೆ ಇರಲಿ ಪೊಲೀಸ್ ತನಿಖೆಯಿಂದ ಗಗನ್ ಸಾವಿನ ನಿಖರ ಕಾರಣ ತಿಳಿದು ಬರಬೇಕಿದೆ.
