ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಡಿಸಿಸಿ ಬ್ಯಾಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷರನ್ನಾಗಿ ರಾಜು ಕಾಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಡಿಸಿಸಿ ಬ್ಯಾಂಕ್ ಸದಸ್ಯರ ಜೊತೆ ಸಭೆ ನಡೆಸಿದ್ದರು. ಈ ವೇಳೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಣ್ಣಾಸಾಹೇಬ ಜೊಲ್ಲೆ
ಅವರು ಚುನಾವಣೆಯಲ್ಲಿ ಸೋಲಲಿದ್ದಾರೆ ಎಂದು ವಿರೋಧಿಗಳು ಅಪಪ್ರಚಾರ ಮಾಡಿದ್ದರು. ಆದರೆ ಜಾರಕಿಹೊಳಿ ಬ್ರದರ್ಸ್ ಸೇರಿ ಎಲ್ಲರೂ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು.
