BREAKING : ಮೈಸೂರಿನಲ್ಲಿ ‘ಕೆಡಿಪಿ’ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ .! ಹೀಗಿದೆ ಹೈಲೆಟ್ಸ್

ಬೆಂಗಳೂರು : ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಗಳ ( ಕೆಡಿಪಿ ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಸರಾಮಯ್ಯ ಮಾತನಾಡಿದರು. ಕೃಷಿ, ತೋಟಗಾರಿಕೆ, ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

ಸಿಎಂ ಸಭೆಯ ಹೈಲೆಟ್ಸ್

  • ಒಟ್ಟು ನೀರಾವರಿ ಭೂಮಿಯಲ್ಲಿ ವಾಡಿಕೆಗಿಂತ 3,000 ಹೆಕ್ಟೇರ್ ಕಡಿಮೆ ಬಿತ್ತನೆ ಆಗಿದೆ. ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ಸಂಗ್ರಹ ಇದೆ. ರೈತರಿಗೆ ಅಗತ್ಯವಿರುವ ಪ್ರಮಾಣಕ್ಕಿಂತ ಹೆಚ್ಚು ಗೊಬ್ಬರವನ್ನು ದಾಸ್ತಾನು ಮಾಡಿಟ್ಟುಕೊಳ್ಳಲಾಗಿದೆ.
  • ಮಹಾರಾಷ್ಟ್ರದ ರೈತರು ವರ್ಷಕ್ಕೆ ಮೂರು ಬೆಳೆ ಬೆಳೆಯುತ್ತಾರೆ. ನಮ್ಮ ಜಿಲ್ಲೆಯಲ್ಲಿ ಎರಡು ಬೆಳೆ ಮಾತ್ರ ಸಾಧ್ಯವಾಗುತ್ತಿದೆ. ಒಮ್ಮೆ ಮಹಾರಾಷ್ಟ್ರಕ್ಕೆ ತೆರಳಿ ಅಧ್ಯಯನ ಮಾಡಿಕೊಂಡು, ನಮ್ಮ ಇಲ್ಲಿನ ವಾತಾವರಣ ಮತ್ತು ಪರಿಸ್ಥಿತಿಗೆ ಹೇಗೆ ಅಳವಡಿಸಲು ಸಾಧ್ಯ ಎನ್ನುವ ಬಗ್ಗೆ ವರದಿ ಸಿದ್ಧಪಡಿಸಬೇಕಿದೆ.
  • ಬಾಳೆ ಬೆಳೆ ಹಿಂದಿನ ತಿಂಗಳುಗಳಲ್ಲಿ ಕಡಿಮೆ ಆಗಿತ್ತು. ಈಗ ಹೆಚ್ಚಾಗಿದೆ. ಶುಂಟಿ ಕೂಡ ಹೆಚ್ಚಾಗಿದೆ. ಅಡಿಕೆ ಬೆಳೆಯುವ ಪ್ರಮಾಣ ಕೂಡ ಹೆಚ್ಚಾಗಿದೆ. ಶುಂಟಿ ಮತ್ತು ಇತರೆ ಬೆಳೆಗಳಿಗೆ ರೋಗ ಬಾದಿಸಿತ್ತು. ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ತಾಪಮಾನ ಕೊರತೆಯಿಂದ ಇಳುವರಿ ಕಡಿಮೆಯಾಗಿತ್ತು. ಬಿಸಿಲು ಬರುತ್ತಿದ್ದಂತೆ ಮತ್ತೆ ಇಳುವರಿ ಹೆಚ್ಚಾಗುವ ಬಗ್ಗೆ ವಿಜ್ಞಾನಿಗಳು ಹೇಳಿದ್ದಾರೆ. ತೆಂಗು ಮತ್ತು ಅಡಿಕೆ ಬೆಳೆಗೆ ಕೆಲವು ಕಡೆ ರೋಗ ಬಂದಿದೆ. ಸ್ಥಳಕ್ಕೆ ಹೋಗಿ ರೋಗ ತಡೆಗಟ್ಟಲು ಮೊದಲ ಹಂತದಲ್ಲಿ ಕ್ರಮ ಕೈಗೊಂಡು ಬಳಿಕ ರೋಗ ನಿವಾರಣೆಗೆ ಔಷಧಗಳನ್ನು ಸಿಂಪಡಿಸಲಾಗಿದೆ. ಆದಾಯ ಹೆಚ್ಚು ಎನ್ನುವ ಕಾರಣಕ್ಕೆ ರೈತರು ತೋಟಗಾರಿಕಾ ಬೆಳೆಗಳಿಗೆ ಹೆಚ್ಚೆಚ್ಚು ಒಲವು ತೋರಿಸುತ್ತಿದ್ದಾರೆ.
  • ಜಿಲ್ಲೆಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗ ಬರದಂತೆ ತಡೆಯಲು ಶೇ.96.55 ಲಸಿಕೆ ಹಾಕಲಾಗಿದೆ.
  • ಕುರಿ ಮೇಕೆಗಳಲ್ಲಿ ಕರುಳುಬೇನೆ ರೋಗದ ವಿರುದ್ಧ ಶೇ. ನೂರಕ್ಕೆ ನೂರು ಲಸಿಕೆ ಹಾಕಲಾಗಿದೆ. ಜಾನುವಾರುಗಳಲ್ಲಿ ಕಂದು ರೋಗದ ವಿರುದ್ಧ ಶೇ.93.33 ರಷ್ಟು ಲಸಿಕೆ ಹಾಕಲಾಗಿದೆ.
  • ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಸಂಪೂರ್ಣ ನಿಂತಿದೆ ಎನ್ನುವ ವರದಿ ಇದೆ. ಇದು ಉತ್ತಮ ಬೆಳವಣಿಗೆ ಎಂದರು.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read