ಬೆಂಗಳೂರು: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಗಗನ್ ರಾವ್ ಆತ್ಮಹತ್ಯೆಗೆ ಶರಣಾಗಿರುವ ಪತಿ. 8 ತಿಂಗಳ ಹಿಂದಷ್ಟೇ ಮೇಘನಾ ಎಂಬುವವರೊಂದಿಗೆ ಗಗನ್ ವಿವಾಹವಾಗಿತ್ತು. ಬ್ಯಾಂಕ್ ಉದ್ಯೋಗಿಯಾಗಿದ್ದ ಗಗನ್ ಗೆ ಪತ್ನಿ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.
ಮೇಘನಾ, ಗಗನ್ ಮೇಲೆ ಅನುಮಾನಪಡುತ್ತಿದ್ದಳಂತೆ ಇದೇ ಕಾರಣ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ. ನಿನ್ನೆ ಕೂಡ ಪತಿ-ಪತ್ನಿ ನಡುವೆ ಗಲಾಟೆಯಾಗಿದೆ. ಇದರಿಂದ ನೊಂದ ಗಗನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
