BIG NEWS: ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಮರುಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಮೈಸೂರು: ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ) ಸಭೆಯಲ್ಲಿ  ಅವರು ಮಾತನಾಡಿದರು. ಹುಲಿ, ಆನೆಗಳು ಅರಣ್ಯದಿಂದ ಹೊರಗೆ ಬರದಂತೆ ತಡೆಯಲು ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು, ಲಾಂಟೆನಾ ತೆಗೆಸಬೇಕು, ಅರಣ್ಯದಲ್ಲಿ ಪ್ರಾಣಿಗಳಿಗೆ ಮೇವು ಬೆಳೆಸಬೇಕು, ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎನ್ನುವ ಮಾಹಿತಿ ಇದೆ ಎಂದರು.

ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7,000 ಅರ್ಜಿಗಳಲ್ಲಿ 5,900 ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಇವು 2019-20ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳಾಗಿವೆ.  ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದ ಕಾರಣ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ. ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು. ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎನ್ನುವುದನ್ನು ಖಾತ್ರಿ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read