ಕೋಲಾರ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಡೆಯಲಿದೆ.
ಮರು ಮತ ಎಣಿಕೆಗಾಗಿ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು 248 ಮತಗಳ ಅಂತರದಿಂದ ಬಿಜೆಪಿಯ ಮಂಜುನಾಥಗೌಡರನ್ನು ಸೋಲಿಸಿದ್ದರು.
ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶಿಸಿ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದು, ಬಳಿಕ ನಂಜೇಗೌಡರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ನೀಡಿ ಮರುಮತ ಎಣಿಕೆಗೆ ಆದೇಶಿಸಿತ್ತು. ಅಂತೆಯೇ ಇಂದು ಮರುಮತ ಎಣಿಕೆ ನಡೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
You Might Also Like
TAGGED:ಮಾಲೂರು
