ದೆಹಲಿ ಕಾರ್ ಸ್ಪೋಟ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read