HomeLatest Newsಹಿಂಗಾರು ಹಂಗಾಮಿಗೆ ನೀರು: ನ. 14ರಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ...

ಹಿಂಗಾರು ಹಂಗಾಮಿಗೆ ನೀರು: ನ. 14ರಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ: 2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ 125ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗೆವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular