BIG NEWS: ಮಾಲೂರು ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ: ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ವಿಧನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ನಿಚ್ಚಳವಾಗಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಏಜೆಂಟ್ ಗಳನ್ನು ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ.

ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಮಾಧ್ಯಮಗಳಿಗೂ ನಿಷೇಧ ಹೇರಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮತ ಎಣಿಕೆಯಲ್ಲಿ ದೋಷವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಮ್ ಕೋರ್ಟ್ ಆದೇಶದ ಮೇರೆಗೆ ಇದೀಗ ಮರು ಮತ ಎಣಿಕೆ ಆರಂಭವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read