ಕಾರವಾರ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 9 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕೆಟ್ಟೆಚ್ಚವಹಿಸುವಂತೆ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.
ಕದಂಬ ನೌಕಾನೆಲೆ ಪ್ರದೇಶ, ಕೈಗಾ ಅಣು ಸ್ಥಾವರ, ಭಟ್ಕಳ, ಗೋವಾ ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯ ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಹಾಗೂ ಡಾಗ್ ಸ್ಕ್ವಾಡ್ ತಂಡಕ್ಕೆ ಸೂಚನೆ ನೀಡಲಾಗಿದೆ. ಗೋವಾ ಭಾಗದ ಮಾಜಾಳಿ, ರಾಮನಗರ ತಾಲೂಕಿನ ಅನಮೋಡ್ ಭಾಗದಲ್ಲಿ ಜಿಲ್ಲೆಗೆ ಬರುವ ವಾಹನಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
