BREAKING : ನಂಜನಗೂಡಿನ ಮಲ್ಲನಮೂಲೆ ಮಠದ ‘ಶ್ರೀ ಚನ್ನಬಸವ ಸ್ವಾಮೀಜಿ’ ಲಿಂಗೈಕ್ಯ.!

ಮೈಸೂರು : ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ನಂಜನಗೂಡು ತಾಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ ಮಠಾಧ್ಯಕ್ಷರಾಗಿದ್ದ ಚನ್ನಬಸವ ಸ್ವಾಮೀಜಿ (83) ನಿನ್ನೆ ಅನಾರೋಗ್ಯದಿಂದ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ನಿಧನರಾದರು.

ಮಠದ ಆವರಣದಲ್ಲಿ ಇಂದು ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

ಪ್ರತಾಪ್ ಸಿಂಹ ಸಂತಾಪ

ನಂಜನಗೂಡಿನ ಮಲ್ಲನ ಮೂಲೆ ಮಠಾಧ್ಯಕ್ಷರಾದ ಪೂಜ್ಯ ಶ್ರೀ ಚನ್ನಬಸವ ಸ್ವಾಮೀಜಿ ರವರು ಶಿವೈಕ್ಯರಾಗಿರುವ ಸುದ್ದಿ ತಿಳಿದು ದುಃಖವಾಯಿತು. ದೇವರು ಪೂಜ್ಯರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅಪಾರ ಭಕ್ತ ವೃಂದಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರತಾಪ್ ಸಿಂಹ ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read