HomeLatest NewsBIG NEWS: ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ: FIR ದಾಖಲು

BIG NEWS: ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ: FIR ದಾಖಲು

ನವದೆಹಲಿ: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ.

ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ, ಯುಎಪಿಎ ಹಾಗೂ ಸ್ಫೋಟಕ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಯುಎಪಿಎ ಸೆಕ್ಷನ್ 16 ಹಾಗೂ 18 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಗಳು ಭಯೋತ್ಪಾದಕ ದಾಳಿಗೆ ಸಂಚು ಹಾಗೂ ಅವುಗಳಿಗೆ ಶಿಕ್ಷೆ ಸಂಬಂಧಿಸಿದ್ದಾಗಿದೆ.

ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯ ಏರ್ ಪೋರ್ಟ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular