HomeLatest NewsBREAKING : ದೆಹಲಿಯಲ್ಲಿ ಭೀಕರ ಕಾರು ಸ್ಪೋಟ ಕೇಸ್ : ಜಮ್ಮು-ಕಾಶ್ಮೀರದಲ್ಲಿ ಹಲವು ಶಂಕಿತರು...

BREAKING : ದೆಹಲಿಯಲ್ಲಿ ಭೀಕರ ಕಾರು ಸ್ಪೋಟ ಕೇಸ್ : ಜಮ್ಮು-ಕಾಶ್ಮೀರದಲ್ಲಿ ಹಲವು ಶಂಕಿತರು ‘NIA’ ವಶಕ್ಕೆ.!

ನವದೆಹಲಿ : ದೆಹಲಿಯಲ್ಲಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟದ ಬಳಿಕ ಎನ್ ಐ ಎ ಜಮ್ಮು-ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿದ್ದು, ಹಲವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟ ಘಟನೆಯಲ್ಲಿ ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ .ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ನಿನ್ನೆ ಸಂಜೆ i20 ಕಾರು ಏಕಾಏಕಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಹಲವರ ದೇಹ ಛಿದ್ರ ಛಿದ್ರವಾಗಿತ್ತು. ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ೬ ಜನರ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಫೋಟದ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದ್ದು, ದೆಹಲಿಯ ಕೊತ್ವಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular