ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್ ನಬಿ ತಾಯಿ ಸೇರಿದಂತೆ 13 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಪೊಲೀಸರು ಪುಲ್ವಾಮದಲ್ಲಿ ಉಮರ್ ನ ಇಬ್ಬರು ಸಹೋದರಿಯರನ್ನು ಹಾಗೂ ತಾಯಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ಕೆಲ ಲಾಡ್ಜ್ ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಕೆಲ ಶಂಕಿತರ ವಿಚಾರಣೆ ನಡೆಸಿದ್ದಾರೆ. 12 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ.
ಶಂಕಿತ ವೈದ್ಯ ಉಮರ್ ನ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ 200ಕ್ಕೂ ಹೆಚ್ಚು ಪೊಲೀಸರು 150ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಮ್ಮುವಿನ ಅನಂತ್ ನಾಗ್ ಜಿಲ್ಲೆಯಲ್ಲಿ ಉಮರ್ ಆರಂಭಿಕ ದಿನಗಳಲ್ಲಿ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್ ಆಗಿ ಕೆಲಸ ಮಾಡಿದ್ದ. ಬಲಿಕ ದೆಹಲಿಗೆ ತೆರಳಿದ್ದ. ಪ್ರಸ್ತುತ ಫರಿದಾಬಾದ್ ನ ಅಲ್ ಫಲಾಹ್ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಹಿನೆಲೆಯಲ್ಲಿ ಫಲಾಹ್ ಕಾಲೇಜಿನ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಧೌಜ್, ಫತೇಪುರ್ ಗ್ರಾಮಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
