BREAKING : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ ಮಹಾಸಭೆ’ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ನವೆಂಬರ್ 14 ರಂದು ನಡೆಯಲಿರುವ “ಮಕ್ಕಳ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಸುಮಾರು 56,000 ಶಾಲೆ/ಕಾಲೇಜುಗಳಲ್ಲಿ ‘ಮೆಗಾ ಪಿಟಿಎಂ’ (ಪೋಷಕ-ಶಿಕ್ಷಕರ ಸಭೆ) ನೆಡಸಲಿದ್ದು, ಅಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದಲ್ಲಿ ಮಕ್ಕಳ ದಿನಾಚಾರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಸ್.ಡಿ.ಎಂ.ಸಿ ಯವರೊಂದಿಗೆ ಪೋಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಇದಕ್ಕೆ ಸಂಪೂರ್ಣ ಬೆಂಬಲ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಾನ್ಯ ಶಾಸಕರುಗಳು ತಮ್ಮ ಕ್ಷೇತ್ರದ ಒಂದು ಶಾಲೆಯಲ್ಲಿ ಪೋಷಕರ ಮಹಾ ಸಭೆಯನ್ನು ಉದ್ಘಾಟಿಸಲಿದ್ದಾರೆ.ಜೊತೆಗೆ ಈ ಹಿಂದೆ ನಡೆಸಿದ ಕಾರ್ಯಾಗಾರದಲ್ಲಿ ನೀವೆಲ್ಲ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಳುಹಿಸಿದ ಕಾಮೆಂಟ್ಸ್ ಗಳು ನನ್ನ ಗಮನಕ್ಕೆ ಬಂದ್ದಿದ್ದು, ಅವುಗಳ ಕುರಿತು ಗಮನಹರಿಸಿ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಕೊರತೆಯಿರುವ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಹಾಗೂ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು.ನಮ್ಮ ಶಾಲೆ ನಮ್ಮ ಜವಾಬ್ದಾರಿ ಮತ್ತು ಸಿ.ಎಸ್.ಆರ್ ನ ಸಮನ್ವಯದೊಂದಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡುವುದು.ಶಿಕ್ಷಕರು, ಎಸ್.ಡಿ.ಎಂ.ಸಿ ಯವರು ಶಾಲೆಯ ಒಟ್ಟಾರೆ ಫಲಿತಾಂಶದ ಬಗ್ಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸುವುದು.ಪೋಷಕರ ಜೊತೆ ಪ್ರತ್ಯೇಕ ಸಭೆ ನಡೆಸಿ ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಕಲಿಕಾ ವಾತಾವರಣವನ್ನು ಮನೆಯಲ್ಲಿ ನೀಡುವಂತೆ ಮನವೊಲಿಸುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಕಾರ್ಯಾಗಾರದಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಆಯುಕ್ತರಾದ ವಿಕಾಶ್ ಕಿಶೋರ್ ಸುರಳ್ಕರ್, ಶಾಲಾ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read