ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟ ಪ್ರಕಣದ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಕಟ್ಟೆಚ್ಚರವಹಿಸಲಾಗಿದೆ. ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುತ್ತಿದೆ.
ಇದೇ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯನ್ನು ಹೊರಡಿಸಿದ್ದು, ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಬರಬೇಕು. ತೀವ್ರ ತಪಾಸಣೆ ನಡೆಯುತ್ತಿರುವ ಕಾರಣ ವಿಳಂಬವಾಗುತ್ತಿದೆ. ಭದ್ರತಾ ಪರಿಶೀಲನೆಗೆ ಸಾಕಷ್ಟು ಸಮಯಗಳು ಬೇಕಾಗುವುದರಿಂದ ಪ್ರಯಾಣಿಕರು ಮುಂಚಿತವಾಗಿ ಏರ್ ಪೋರ್ಟ್ ಗೆ ಆಗಮಿಸುವಂತೆ ಸೂಚಿಸಿದೆ.
ಪ್ರಯಾಣಿಕರು ಬೇಗನೇ ವಿಮಾನ ನಿಲ್ದಾಣಕ್ಕೆ ಬರುವುದರಿಂದ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಬಹುದು, ಪ್ರಯಾಣಿಕರ ಸುಗಮ ಸಂಚಾರಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದೆ.
