ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ದೆಹಲಿ ಸ್ಫೋಟದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿ ರೇಖಾ ಗುಪ್ತಾ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರವನ್ನು ಸಿಎಂ ರೇಖಾ ಗುಪ್ತಾ ಘೋಷಿಸಿದ್ದಾರೆ. ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ತಲಾ 5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ದೆಹಲಿಯಲ್ಲಿ ನಡೆದ ಘಟನೆ ಇಡೀ ನಗರವನ್ನೇ ಆಘಾತಕ್ಕೀಡು ಮಾಡಿದೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳ ಜೊತೆ ದೆಹಲಿ ಸರ್ಕಾರ ನಿಲ್ಲುತ್ತದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
