ಮುಂಬೈ : ಬಾಲಿವುಡ್ ನಟ ಗೋವಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಾಲಿವುಡ್ ನಟ ಗೋವಿಂದಾ ಮಂಗಳವಾರ ತಡರಾತ್ರಿ ಮುಂಬೈನ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ದೃಢಪಡಿಸಿದ್ದಾರೆ.
ವೈದ್ಯರನ್ನು ಸಂಪರ್ಕಿಸಿದ ನಂತರ ಅವರಿಗೆ ಔಷಧಿ ನೀಡಲಾಯಿತು ಮತ್ತು ಬೆಳಿಗ್ಗೆ 1 ಗಂಟೆಗೆ ತುರ್ತು ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಬಿಂದಾಲ್ ತಿಳಿಸಿದರು. ನಟನಿಗೆ ಹಲವಾರು ಪರೀಕ್ಷೆಗಳನ್ನು ನಡೆಸಲಾಗಿದ್ದು, ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ಪ್ರಸ್ತುತ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ಹಂಚಿಕೊಳ್ಳಲಾಗಿಲ್ಲ.
