HomeLatest Newsರಾಜ್ಯದ ಜನತೆ ಗಮನಕ್ಕೆ : 'ಆನ್ ಲೈನ್' ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು ನ.30...

ರಾಜ್ಯದ ಜನತೆ ಗಮನಕ್ಕೆ : ‘ಆನ್ ಲೈನ್’ ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು ನ.30 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯದ ಜನತೆ ಗಮನಕ್ಕೆ.! ಆನ್ ಲೈನ್ ಮೂಲಕ ಜಾತಿ ಗಣತಿ ಸಮೀಕ್ಷೆಯಲ್ಲಿ ಭಾಗಿಯಾಗಲು ನ.30 ರವರೆಗೆ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 30: 11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ.

ರಾಜ್ಯಾದ್ಯಂತ ಓಬಿಸಿ, ಎಸ್ಸಿ-ಎಸ್ಟಿ ಸೇರಿ ಎಲ್ಲಾ ವರ್ಗದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆಯೋಗ ಕೈಗೊಂಡಿತ್ತು. ಅ.31ಕ್ಕೆ ಮನೆ-ಮನೆ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸದವರಿಗೆ ಅವಕಾಶ ನೀಡಲು ನ.10ರವರೆಗೆ ಆನ್‌ಲೈನ್ ಸಮೀ “ಕ್ಷೆಯ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ  ಸಹಾಯವಾಗುವ ನಿಟ್ಟಿನಲ್ಲಿ  ನ.30 ರವರೆಗೆ ವಿಸ್ತರಿಸಲಾಗಿದೆ. https://kscbcself declaration.karnataka.gov.in ಮೂಲಕ ನೀವು ಸ್ವಯಂ ಮಾಹಿತಿ ಧೃಡೀಕರಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular