ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಡಿಸೆಂಬರ್ 7ರಂದು ವೃಕ್ಷೋಥಾನ್ 2025 ನಡೆಯಲಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ 7ರಂದು ವೃಕ್ಷೋಥಾನ್ 2025 ನಡೆಯಲಿದ್ದು ಒಟ್ಟು ₹10 ಲಕ್ಷದ ಬಹುಮಾನ ನೀಡಲಾಗುವುದು. ಯಾವುದೇ ವಯೋಮಿತಿಯ ನಿರ್ಬಂಧವಿಲ್ಲದೆ 5 ಕಿ.ಮೀ., 10 ಕಿ.ಮೀ. ಮತ್ತು 21 ಕಿ.ಮೀ. ವಿಭಾಗದಲ್ಲಿ ವೃಕ್ಷೋಥಾನ್ ನಡೆಯಲಿದೆ. ಆಸಕ್ತರು https://vrukshathon.co.in/ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
