ಬೆಂಗಳೂರು : 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಯು.ಪಿ.ಎಸ್.ಸಿ ನಾಗರಿಕ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.
ಯು.ಪಿ.ಎಸ್.ಸಿ ನಾಗರಿಕ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಯನ್ನು ಅರ್ಹ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿಯೊಂದಿಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ, ಪ್ರಯಾಣ ಭತ್ಯೆ ಅಥವಾ ಇತರೆ ಯಾವುದೇ ರೀತಿಯ ಆರ್ಥಿಕ ಸೌಲಭ್ಯವನ್ನು ಒದಗಿಸಲಾಗುವುದಿಲ್ಲ. ತರಬೇತಿ ಪಡೆಯುವ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ನಿಗದಿತ ವಸತಿ ನಿಲಯದಲ್ಲಿಯೇ ಇದ್ದು, ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯುವುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ದಿನಾಂಕ:15.11.2025 ರಂದು ಅಪರಾಹ್ನ 3.00 ಗಂಟೆಯಿಂದ 5.00 ಗಂಟೆ ಅವಧಿಯಲ್ಲಿ ಬೆಂಗಳೂರು ನಗರ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ಪತ್ರ (Hall ticket) ವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪಡೆಯುವುದು.ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗದಿಪಡಿಸುವ ಷರತ್ತುಗಳನ್ನು ಮತ್ತು ಸೂಚನೆಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸುವುದು ಎಂದು ತಿಳಿಸಿದೆ.



