ಬೆಂಗಳೂರು : ಕನ್ನಡದ ‘ತಿಥಿ’ ಸಿನಿಮಾ ಖ್ಯಾತಿಯ ನಟ ಗಡ್ಡಪ್ಪ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಅವರ ಮೂಲ ಹೆಸರು ಚನ್ನೇಗೌಡ (89). ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಗಡ್ಡಪ್ಪ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.
ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಗಡ್ಡಪ್ಪ ಪುತ್ರಿ ಶೋಭಾ ತಿಳಿಸಿದ್ದಾರೆ. ಅವರು ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.
