HomeLatest Newsರೈತರೇ ಗಮನಿಸಿ : ಬೆಳೆಗಳ ವಿಮೆ ನೋಂದಣಿಗೆ ಆಹ್ವಾನ

ರೈತರೇ ಗಮನಿಸಿ : ಬೆಳೆಗಳ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ಜೋಳ, ಕಡಲೆ ಹಾಗೂ ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ಶೇಂಗಾ, ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ, ಸೂರ್ಯಕಾಂತಿ, ಮಳೆಯಾಶ್ರಿತ ಬೆಳೆ ಕುಸುಬೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ, ಈರುಳ್ಳಿ ಬೆಳೆಗಳು ಜಿಲ್ಲೆಯ ಬೆಳೆಗಳಾಗಿವೆ.

*ವಿಮೆಗೆ ಕೊನೆಯ ದಿನ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ ಬೆಳೆಗಳಿಗೆ ಡಿ.15. ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.15 ಮತ್ತು ಕಡಲೆ ಬೆಳೆಗೆ ಡಿ.31.

ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ, ಸೂರ್ಯಕಾಂತಿ ಬೆಳೆಗಳಿಗೆ ಡಿ.27 ಮತ್ತು ಈರುಳ್ಳಿ ಬೆಳೆಗೆ 2026 ರ ಫೆ.27 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular