ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
ಹೌದು, ಬುರುಡೆ ಗ್ಯಾಂಗ್ ಶಾಕ್ ಎದುರಾಗಿದ್ದು, ಎಸ್ ಐ ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಹಾಗೂ ವಿಠ್ಠಲಗೌಡಗೆ ಮತ್ತೆ ತನಿಖೆಯ ಬಿಸಿ ಮುಟ್ಟಲಿದೆ.
ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಿಸಿದೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ನ ನಾಲ್ವರು ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಧರ್ಮಸ್ಥಳ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದು ಕೋರಿ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ಟಿ.ಜಯಂತ್, ವಿಠಲ ಗೌಡ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.ಪರ-ವಿರೋಧ ವಾದ ಆಲಿಸಿದ್ದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿತ್ತು.
