HomeLatest NewsGOOD NEWS : ರಾಜ್ಯದ ಮಹಿಳಾ ನೌಕರರಿಗೆ 1 ದಿನ 'ಋತುಚಕ್ರ ರಜೆ' ಮಂಜೂರು :...

GOOD NEWS : ರಾಜ್ಯದ ಮಹಿಳಾ ನೌಕರರಿಗೆ 1 ದಿನ ‘ಋತುಚಕ್ರ ರಜೆ’ ಮಂಜೂರು : ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ, ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ, ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಆದೇಶಿಸಿದೆ.
ಷರತ್ತುಗಳು:

  1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ” ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ “ಋತುಚಕ್ರ ರಜೆ” ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶವಿರುವುದಿಲ್ಲ.
  2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular