HomeLatest News'ಕೃಷಿ ಪ್ರಶಸ್ತಿ' ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

‘ಕೃಷಿ ಪ್ರಶಸ್ತಿ’ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಮಳೆಯಾಶ್ರಿತ ಬೆಳೆಗಳಾದ ಜೋಳ, ಸೂರ್ಯಕಾಂತಿ ಮತ್ತು ಕಡಲೆ ಬೆಳೆಗಳಿಗೆ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆ ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಆನ್ ಲೈನ್ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‌ಐಡಿ ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular