BIG NEWS : ‘ಮಕ್ಕಳ ದಿನಾಚರಣೆ’ ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದು ‘ಪೋಷಕ-ಶಿಕ್ಷಕರ ಸಭೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಇಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಸಭೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನಲ್ಲಿ AWP&B ಯಲ್ಲಿ ಪ್ರಾಥಮಿಕ ಶಾಲೆ-41,506 ಹಾಗೂ ಪ್ರೌಢಶಾಲೆ-5,360 ಒಟ್ಟು 46,866 ಶಾಲೆಗಳಲ್ಲಿ ಪೋಷಕರ ಸಭೆ ನಡೆಸಲು ಹಾಗೂ ದಾಖಲೀಕರಣಕ್ಕಾಗಿ ಪ್ರತಿ ಶಾಲೆಗೆ ರೂ.1500/-ರಂತೆ ಒಟ್ಟು ರೂ.702.99 ಲಕ್ಷಗಳು ಅನುದಾನ ಅನುಮೋದನೆಯಾಗಿರುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದಿನಾಂಕ: 14.11.2025 ರಂದು ಏಕಾಲದಲ್ಲಿ ಮೆಗಾ ಪೋಷಕರ ಸಭೆಯನ್ನು ನಡೆಸಲು ರೂ.1500/- ಗಳನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಪೋಷಕರಿಗೆ 2025-26 ಸಾಲಿನಲ್ಲಿ ಸಭೆಗಳನ್ನು ಹಮ್ಮಿಕೊಳ್ಳಬೇಕಾಗಿರುತ್ತದೆ. (ಪ್ರಾಥಮಿಕ ಶಾಲೆ-41,506 ಹಾಗೂ ಪ್ರೌಢಶಾಲೆ-5,360 ಮಾತ್ರ) ಪೋಷಕರ ಸಭೆಯಲ್ಲಿ ಪೋಷಕರಿಗೆ, ವೇಳಾಪಟ್ಟಿಯಲ್ಲಿರುವಂತೆ ಪೋಷಕರ ಸಭೆಯ ಹಿನ್ನೆಲೆ ಹಾಗೂ ನಿಗಧಿಪಡಿಸಲಾಗಿರುವ ವಿಷಯಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸಬೇಕಾಗಿರುತ್ತದೆ ಮಾಡಲಾಗಿರುವ ಸಭೆಯ ಫೋಟೋ ಮತ್ತು ವರದಿಯನ್ನು ssksdmc@gmail.com ಗೆ ಕಳುಹಿಸುವುದು. ಹಾಗೂಮೇಲ್ಕಂಡ ಅನುದಾನವನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ component 2.3.1.2 ಹಾಗೂ ಸರ್ಕಾರಿ ಪ್ರೌಢ ಶಾಲೆಗಳಿಗೆ component 2.1.1.2 PAB ಅನುಮೋದಿತ ಚಟುವಟಿಕೆ ಅಡಿಯಲ್ಲಿ ಅನುಮೋದಿಸಲಾಗಿರುತ್ತದೆ.

ಶಾಲೆಗಳಲ್ಲಿ, ವೆಚ್ಚವನ್ನು, ಭರಿಸಿಕೊಂಡು, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಿರುವ ಬಗ್ಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು (ಆಡಳಿತ) ಖಾತ್ರಿಪಡಿಸಿಕೊಳ್ಳುವುದು. ಸಂಬಂಧಪಟ್ಟ ಶಾಲೆಗಳಿಂದ ಉಪಯೋಗಿತ ಪ್ರಮಾಣ ಪತ್ರಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಯವರು ಪಡೆದು ಕ್ರೋಢೀಕರಿಸುವುದು ಕ್ರೋಢೀಕರಿಸಿದ ಉಪಯೋಗಿತ ಪ್ರಮಾಣ ಪತ್ರವನ್ನು ಉಪನಿರ್ದೇಶಕರು (ಆಡಳಿತ). ರವರಿಗೆ ಸಲ್ಲಿಸುವುದು. ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಕ್ರೋಢೀಕರಿಸಿದ ದೃಢೀಕೃತ ಉಪಯೋಗಿತ ಪ್ರಮಾಣ ಪತ್ರವನ್ನು ಪಡೆದು ಉಪನಿರ್ದೇಶಕರು (ಆಡಳಿತ) ರವರು ನೀಡಲಾದ ನಮೂನೆ ಯಲ್ಲಿ ಭರ್ತಿ ಮಾಡಿ ದೃಢೀಕರಿಸಿ ದಿನಾಂಕ: 30.11.2025 ರೊಳಗೆ ರಾಜ್ಯ ಕಚೇರಿಯ ಇ-ಮೇಲ್ ವಿಳಾಸ ssksdmc@gmail.comಗೆ ಕಡ್ಡಾಯವಾಗಿ ಸಲ್ಲಿಸಲು ಸೂಚಿಸಿದೆ.

ಸಚಿವ ಮಧು ಬಂಗಾರಪ್ಪ ಹೇಳಿದ್ದೇನು..?
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದಲ್ಲಿ ಮಕ್ಕಳ ದಿನಾಚಾರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಸ್.ಡಿ.ಎಂ.ಸಿ ಯವರೊಂದಿಗೆ ಪೋಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಾನ್ಯ ಶಾಸಕರುಗಳು ತಮ್ಮ ಕ್ಷೇತ್ರದ ಒಂದು ಶಾಲೆಯಲ್ಲಿ ಪೋಷಕರ ಮಹಾ ಸಭೆಯನ್ನು ಉದ್ಘಾಟಿಸಲಿದ್ದಾರೆ.ಜೊತೆಗೆ ಈ ಹಿಂದೆ ನಡೆಸಿದ ಕಾರ್ಯಾಗಾರದಲ್ಲಿ ನೀವೆಲ್ಲ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಳುಹಿಸಿದ ಕಾಮೆಂಟ್ಸ್ ಗಳು ನನ್ನ ಗಮನಕ್ಕೆ ಬಂದ್ದಿದ್ದು, ಅವುಗಳ ಕುರಿತು ಗಮನಹರಿಸಿ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಕೊರತೆಯಿರುವ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಹಾಗೂ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು.

ನಮ್ಮ ಶಾಲೆ ನಮ್ಮ ಜವಾಬ್ದಾರಿ ಮತ್ತು ಸಿ.ಎಸ್.ಆರ್ ನ ಸಮನ್ವಯದೊಂದಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡುವುದು.ಶಿಕ್ಷಕರು, ಎಸ್.ಡಿ.ಎಂ.ಸಿ ಯವರು ಶಾಲೆಯ ಒಟ್ಟಾರೆ ಫಲಿತಾಂಶದ ಬಗ್ಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸುವುದು.ಪೋಷಕರ ಜೊತೆ ಪ್ರತ್ಯೇಕ ಸಭೆ ನಡೆಸಿ ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಕಲಿಕಾ ವಾತಾವರಣವನ್ನು ಮನೆಯಲ್ಲಿ ನೀಡುವಂತೆ ಮನವೊಲಿಸುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read