BREAKING: ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ: ರ್ಯಾಡಿಸನ್ ಹೋಟೆಲ್ ಬಳಿ ಘಟನೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ.

ದೆಹಲಿಯ ಮಹಿಪಾಲ್ಪುರದ ರ್ಯಾಡಿಸನ್ ಹೋಟೆಲ್ ಬಳಿ ಭಾರಿ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9:18ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read