ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ದೆಹಲಿಯ ಎಲ್ ಎನ್ ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಬಿಲಾಲ್ ಎಂದು ಗುರುತಿಸಲಾಗಿದೆ. ದೆಹಲಿ ಹೊರವಲಯದ ನಿವಾಸಿಯಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತಿದೆ.
ಸೋಮವಾರ ಸಂಜೆ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಫೋಟಗೊಂಡಿದ್ದು, ದುರಂತದಲ್ಲಿ ಈವರೆಗೆ 13 ಜನರು ಬಲಿಯಾಗಿದ್ದಾರೆ. 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯ ಹಿಂದೆ ಉಗ್ರರ ಕೈವಾಡವಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
