ಬಾಗಲಕೋಟೆ: ಬೈಕ್ ಹಾಗೂ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ನಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ಇಬ್ಬರು, ಓರ್ವ ಪಾದಚಾರಿ ಮೃತಪಟ್ಟಿದ್ದಾರೆ. ಗಣಪತಿ ಬತ್ತಿ (42), ತಪನ್ ಕುಮಾರ್ ದಲಾಯಿ (46) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರು ಚಾಲಕ ಸುಭಾಷ್ ರಾಮತೀರ್ಥ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
