ಲಖನೌ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಪ್ರಕರಣದ ತನಿಖೆಯನ್ನು ಎನ್ ಐಎ ಹಾಗೂ ಸ್ಥಳೀಯ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ಮತ್ತೋರ್ವ ವೈದ್ಯನನ್ನು ಪೊಲೀಸರು ನಂಧಿಸಿದ್ದಾರೆ.
ಈಗಾಗಲೇ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಡಾ.ಶಾಹೀನ್ ಹಾಗೂ ಡಾ. ಸಜ್ಜದ್ ಎಂಬ ಇಬ್ಬರು ವೈದ್ಯರು ಸೇರಿ ಹಲವು ಸಹಂಕಿತರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಉತ್ತರ ಪ್ರದೇಶದ ಹಾಪೂರ್ ನಲ್ಲಿ ಮತ್ತೋರ್ವ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಡಾ.ಫಾರೂಕ್ ಬಂಧಿತ ಆರೋಪಿ. ಈತ ಅಲ್ ಫಹಾಲ್ ವಿವಿಯಲ್ಲಿ ಎಂಬಿಬಿಎಸ್ ಪದವಿ ಮಾಡಿದ್ದ. ಜಿಎಸ್ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈತನಿಗೂ ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೂ ಲಿಂಕ್ ಇರುವ ಶಂಕೆ ಹಿನ್ನೆಲೆಯಲ್ಲಿ ಡಾ.ಫಾರೂಕ್ ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
