ಚೀನಾ: 1,500 ವರ್ಷಗಳಷ್ಟು ಪುರಾತನ ದೇವಾಲಯದಲ್ಲಿ ಬೆಂಕಿ ಅವಘಡ

ಬೀಜಿಂಗ್: ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಇದ್ದ 1500 ವರ್ಷಗಳಷ್ಟು ಹಳೆಯದಾದ ಪುರಾತನ ದೇವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದೇವಾಯದ ಕಟ್ಟಡ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದಿದೆ.

ಇಲ್ಲಿನ ಜಾಂಗ್ಜಿಯಾಗ್ಯಾಂಗ್ ನಲ್ಲಿರುವ 1500 ವರ್ಷಗಳಷ್ಟು ಹಳೆಯದಾದ ಯೋಂಗ್ ಕಿಂಗ್ ದೇವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾಗಿರುವ ಈ ದೇಲಯ ಹಾಗೂ ಇಲ್ಲಿನ ಸಂಕಿರ್ಣದೊಳಗಿನ ಬಹುಮಹಡಿ ಮಂಟಪಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

ಮಾಹಿತಿ ಪ್ರಕಾರ ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ದೋಷಪೂರಿತ ವೈರಿಂಗ್, ಧೂಪದ ದ್ರವ್ಯಗಳ ಬಳಕೆ ಕಾರಣ ಎನ್ನಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read