HomeLatest Newsನ.15 ರಂದು ಬಳ್ಳಾರಿ ಮೇಯರ್, ಉಪಮೇಯರ್ , ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ : ನಿಷೇಧಾಜ್ಞೆ...

ನ.15 ರಂದು ಬಳ್ಳಾರಿ ಮೇಯರ್, ಉಪಮೇಯರ್ , ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ : ನಿಷೇಧಾಜ್ಞೆ ಜಾರಿ.!

ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ರಕ್ಷಣೆ ಒದಗಿಸುವ ಹಿತದೃಷ್ಠಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ-ಮುತ್ತಲಿನ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

*ನಿಷೇಧಿಸಲಾದ ಚಟುವಟಿಕೆ

ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತç, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ/ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತçಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು.

ಕಾರು, ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ‍್ಯಾಲಿಯನ್ನು ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವುದು (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹೊರಡುಪಡಿಸಿ).

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಆಫೀಸರ್ ಅಭಿಪ್ರಾಯದಲ್ಲಿ ಸಭ್ಯತೆ, ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular