ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲು ತೂರಾಟ ಪ್ರಕರಣದಲ್ಲಿ ಯಮಕನಮರಡಿ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಹೆಬ್ಬಾಳದ ಚನ್ನಗೌಡ ಸಸಾಲಟ್ಟಿ, ಪ್ರಶಾಂತ ಮುಗಳಿ, ವಿನಾಯಕ ಕೋಟಾವಾಲಿ, ಉಳ್ಳಾಗಡ್ಡಿ, ಖಾನಾಪುರದ ಮಲ್ಲಪ್ಪ ಘಟಗಿ, ಕಾಕತಿಯ ಶಿವಪ್ಪ ವಾಣಿ, ಬಿದ್ರೆವಾಡಿಯ ಸೋಮನಾಥ ಹಿರೇಮಠ ಬಂಧಿತರು.
ಪ್ರತಿ ಟನ್ ಕಬ್ಬಿಗೆ 3500ದರ ನಿಗದಿಗೆ ಆಗ್ರಹಿಸಿ ರೈತರು ಹತ್ತರಗಿ ಬಳಿ ಪ್ರತಿಭಟನೆ ನಡೆಸಿದ್ದ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಸಾರಿಗೆ ಬಸ್ ಸೇರಿದಂತೆ ಹಲವು ವಾಹನಗಳನ್ನು ಜಖಂಗೊಳಿಸಿದ್ದರು. ಘಟನೆಯಲ್ಲಿ 12ಜನ ಪೊಲೀಸರು ಗಾಯಗೊಂಡಿದ್ದರು.
