ರಾಜ್ಯದ ರೈಲು ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರು ನಾಮಕರಣ ಮಾಡಲು ಶಿಫಾರಸು

ಬೆಂಗಳೂರು: ರಾಜ್ಯದ ರೈಲು ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರು ನಾಮಕರಣ ಮಾಡಲು ಸರ್ಕಾರ ಶಿಫಾರಸು ಮಾಡಿದೆ.

ಮೂಲ ಸೌಕರ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು, ಕೇಂದ್ರ ಸರ್ಕಾರದ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ರೈಲ್ವೆ ವಿಭಾಗದ ರೈಲು ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಪ್ರಸ್ತಾವವನ್ನು ಅನುಮೋದಿಸಲಾಗಿದೆ.

ಬೀದರ್ ರೈಲು ನಿಲ್ದಾಣಕ್ಕೆ ಚನ್ನಬಸವ ಪಟ್ಟದೇವರು ರೈಲ್ವೆ ಸ್ಟೇಷನ್, ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಶಿವಬಸವ ಮಹಾ ಸ್ವಾಮೀಜಿ ರೈಲು ನಿಲ್ದಾಣ, ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಶಿವಮೊಗ್ಗ ಸೂರಗೊಂಡನಕೊಪ್ಪ ರೈಲು ನಿಲ್ದಾಣಕ್ಕೆ ಭಾಯಾಗಢ ರೈಲು ನಿಲ್ದಾಣ ಎಂದು ನಾಮಕರಣ ಮಾಡುವಂತೆ ಶಿಫಾರಸು ಮಾಡಲಾಗಿದೆ.

ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ರಾಜ್ಯ ಸರ್ಕಾರವು ಈ ಪತ್ರದಲ್ಲಿ ಪ್ರಸ್ತಾಪಿಸಿದಂತೆ ಈ ರೈಲು ನಿಲ್ದಾಣಗಳ ಮರುನಾಮಕರಣಕ್ಕಾಗಿ ಅಗತ್ಯ ಅನುಮೋದನೆಗಳು ಮತ್ತು ಅಧಿಸೂಚನೆಯನ್ನು ಹೊರಡಿಸಲು ಭಾರತ ಸರ್ಕಾರ, ಗೃಹ ವ್ಯವಹಾರಗಳ ಸಚಿವಾಲಯವನ್ನು ವಿನಂತಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read