ಮುಂದಿನ ಅಧಿವೇಶನದಲ್ಲಿ ಜಿಬಿಎ 2ನೇ ತಿದ್ದುಪಡಿ ವಿಧೇಯಕ ಮಂಡನೆ: ಬೆಂಗಳೂರು ರಸ್ತೆಗಳಲ್ಲಿ ಕಸಗುಡಿಸುವ ಯಂತ್ರವನ್ನು ₹613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಅನುಮೋದನೆ

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಯಾಂತ್ರಿಕ ಕಸಗುಡಿಸುವಿಕೆ ಯಂತ್ರವನ್ನು ₹613.25 ಕೋಟಿಗಳ ಅಂದಾಜು ಮೊತ್ತದಲ್ಲಿ ಬಾಡಿಗೆ ಆಧಾರದಲ್ಲಿ 7 ವರ್ಷಗಳ ಅವಧಿಗೆ ಪಡೆಯಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು  

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ಲಾಪುರ ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜೀವನ ಕಾಮಗಾರಿಗಳನ್ನು ₹21 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ್ ಗ್ರಾಮದ ಹತ್ತಿರ (ಗೌರಮ್ಮ ಬಂಡಿ) ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜ್ಜಿವನ ಕಾಮಗಾರಿಗಳನ್ನು ₹34 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ 2025 ಅನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನ.

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಯಾಂತ್ರಿಕ ಕಸಗುಡಿಸುವಿಕೆ ಯಂತ್ರವನ್ನು ₹613.25 ಕೋಟಿಗಳ ಅಂದಾಜು ಮೊತ್ತದಲ್ಲಿ ಬಾಡಿಗೆ ಆಧಾರದಲ್ಲಿ 7 ವರ್ಷಗಳ ಅವಧಿಗೆ ಪಡೆಯಲು ಆಡಳಿತಾತ್ಮಕ ಅನುಮೋದನೆ.

ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ ಇಸ್ರೋ ಅಭಿವೃದ್ಧಿಪಡಿಸಿರುವ ಜಿಪಿಎಸ್‌ ಸಂವಹನ ವ್ಯವಸ್ಥೆಯನ್ನು 12,003 ಮೀನುಗಾರಿಕಾ ದೋಣಿಗಳಲ್ಲಿ ಕೇಂದ್ರ ಮತ್ತು ಸರ್ಕಾರದ ಸಹಕಾರದೊಂದಿಗೆ ₹43.69 ಕೋಟಿ ವೆಚ್ಚದಲ್ಲಿ ಅಳವಡಿಸಲು ತೀರ್ಮಾನ.

ಬೀದ‌ರ್ ಜಿಲ್ಲೆಯ ಭಾಲ್ಕಿ ಪುರಸಭೆಯಿಂದ ನಗರಸಭೆಯನ್ನು ರಚಿಸಿ ಭಾಲ್ಕಿ ನಗರಸಭೆ ಎಂದು ಘೋಷಿಸಲು ತೀರ್ಮಾನ.

ಬೀದ‌ರ್ ಜಿಲ್ಲೆಯ ಕಮಲನಗರ ಗ್ರಾಮ ಪಂಚಾಯಿತಿಯನ್ನು ಕಮಲನಗರ ಪಟ್ಟಣ ಪಂಚಾಯಿತಿ ಎಂದು ಘೋಷಿಸಲು ನಿರ್ಣಯ.

ಮೈಸೂರಿನಲ್ಲಿ ಸರ್ಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು ₹15 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ₹27.92 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣಗೊ೦ಡಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನೆಲ ಮತ್ತು ಮೊದಲನೇ ಮಹಡಿಗೆ ಅವಶ್ಯವಿರುವ ಸರ್ವೀಸಸ್‌ಗಳನ್ನು ₹21 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025 – 2030ಕ್ಕೆ ಅನುಮೋದನೆ

ಐಐಐಟಿ ಧಾರವಾಡದಲ್ಲಿರುವ ಕ್ವಾಂಟಮ್ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಕಂಪ್ಯೂಟಿಂಗ್‌ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು (CoE) ಐದು ವರ್ಷಗಳಲ್ಲಿ ಲೀಪ್ ಅಡಿಯಲ್ಲಿ ₹18 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read