ಬೆಂಗಳೂರು: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಒಂದು ರೂಪಾಯಿ ಸೆಸ್ ವಿಧಿಸುವ ಬಗ್ಗೆ ಕಾರ್ಮಿಕ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಆದರೆ, ಈ ಪ್ರಸ್ತಾವನೆ ಅನುಷ್ಠಾನಕ್ಕೆ ಸೂಕ್ತವಾಗಿಲ್ಲ ಎಂದು ಆರ್ಥಿಕ ಇಲಾಖೆ ತಿಳಿಸಿದ್ದು, ಪ್ರಸ್ತಾವವನ್ನು ತಿರಸ್ಕರಿಸಿದೆ.
ಅಸಂಘಟಿತ ವಲಯದಲ್ಲಿ ಸುಮಾರು 1.30 ಕೋಟಿ ಕಾರ್ಮಿಕರಿದ್ದು, ಇವರ ಕಲ್ಯಾಣ ಹಾಗೂ ಉಚಿತ ಆರೋಗ್ಯ ಸೇವೆ ಒದಗಿಸಲು ದೊಡ್ಡ ಮೊತ್ತದ ಸಂಪನ್ಮೂಲ ಅಗತ್ಯವಿದೆ. ಪೆಟ್ರೋಲ್ ,ಡೀಸೆಲ್ ಮತ್ತು ಎಥೆನಾಲ್ ಮೇಲೆ ಸೆಸ್ ವಿಧಿಸುವುದರಿಂದ ವಾರ್ಷಿಕ ಸುಮಾರು 2120 ಕೋಟಿ ರೂ. ಸಂಗ್ರಹವಾಗಲಿದ್ದು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಾದ ಆರೋಗ್ಯ ಸೌಲಭ್ಯ, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಬಳಕೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿ ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
