HomeLatest NewsBIG NEWS: ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಡಿ. 8 ರಿಂದ 10...

BIG NEWS: ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಡಿ. 8 ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 8 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular