ಬೆಂಗಳೂರು : ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಈ ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದೆ.
ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ 1926 ಸಂಖ್ಯೆಗೆ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

