ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಊಟ ಮಾಡಿದ ಎಂಟು ಜನ ಅಸ್ವಸ್ಥರಾಗಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಮದ್ದಿರೆಡ್ಡಿ ಭಾಗ್ಯಮ್ಮ, ಮಣಿ, ಸುಬ್ರಮಣಿ, ಈಶ್ವರಮ್ಮ, ಮದ್ದಕ್ಕ, ಮಂಜುನಾಥ ಸೇರಿ 8 ಮಂದಿ ಅಸ್ವಸ್ಥರಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮನೆಗೆ ಬಂದು ಸಾಂಬಾರ್ ಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥರನ್ನು ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
