ವಿವಿಧ ಯೋಜನೆಗಳಲ್ಲಿ ಸಹಾಯಧನ/ ಷೇರುಧನ ಮಂಜೂರಾತಿಗೆ ಸಹಕಾರ ಸಂಘಗಳಿಂದ ಅರ್ಜಿ ಆಹ್ವಾನ

ಸಹಕಾರ ಸಂಘಗಳ ಉಪನಿಬಂಧಕರು, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಯಿಂದ 2025-26 ನೇ ಸಾಲಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಕಾಯಕ್ರಮಗಳ ಅಡಿಯಲ್ಲಿ ವಿವಿಧ ಯೋಜನೆಗಳಲ್ಲಿ ಸಹಾಯಧನ/ಷೇರುಧನ ಮಂಜೂರಾತಿಗಾಗಿ ಅರ್ಹ ಸಹಕಾರ  ಸಂಘಗಳಿಂದ   ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆ ನವೆಂಬರ್ 13 ರಿಂದ ಪ್ರಾರಂಭವಾಗಿದ್ದು, ಡಿಸೆಂಬರ್ 2 ಕೊನೆಯ ದಿನವಾಗಿದ್ದು, ಆನ್‍ಲೈನ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. 

ಜಿಲ್ಲಾ ಪಂಚಾಯತ್ ಕಾರ್ಯಕ್ರಮ: ವಿವಿಧ ಸಹಕಾರಿ ಸಂಘಗಳಿಗೆ ಸಹಾಯ/ಎನ್.ಸಿ.ಡಿ.ಸಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಗ್ರಾಹಕರ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಗಟು ಮಾರಾಟ ಸಹಕಾರ ಸಂಘ, ಮಹಿಳಾ ಸಹಕಾರ ಸಂಘಗಳು ಅರ್ಜಿ ಸಲ್ಲಿಸಬಹುದು.

ಇತರೆ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಯಡಿ ವಿವಿಧ ಮಾದರಿಯ ಸಹಕಾರ ಸಂಘಗಳು ಅರ್ಜಿ ಸಲ್ಲಿಸಬಹುದು.

ತಾಲ್ಲೂಕು ಪಂಚಾಯತ್  ಕಾಯಕ್ರಮ:

ವಿ.ಘ.ಯೋ-ಆಸ್ತಿಗಳ ಸೃಷ್ಟಿಗಾಗಿ ಪಿ.ಸಿ.ಎ.ಆರ್.ಡಿ.ಬಿ ಮಂಜೂರು ಮಾಡಿದ ಸಾಲಗಳ ಮೇಲೆ ಸಹಾಯಧನ ಯೋಜನೆಗೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಕಾರ್ಡ್) ಗಳು ಮತ್ರ ಅರ್ಜಿ ಸಲ್ಲಿಸಬಹುದು. ಮಹಿಳಾ ಸಹಕಾರ ಸಂಘಗಳಲ್ಲಿ ಹೂಡಿಕೆಗಳು ಮಹಿಳಾ ಸಹಕಾರ ಸಂಘಗಳು ಮಾತ್ರ ಅರ್ಜಿ ಸಲ್ಲಿಸಬಹುದು.    

ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವೆಬ್‍ಸೈಟ್ ವಿಳಾಸ: https://kodagu.nic.in ಹೆಚ್ಚಿನ ಮಾಹಿತಿಗೆ ಸಹಕಾರ ಸಂಘಗಳ ಉಪ ನಿಬಂಧಕರ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯನ್ನು ಸಂಪಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read