ಬೆಂಗಳೂರು : ಸ್ಕ್ಯಾನಿಂಗ್ ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಆಘಾತಕಾರಿ ವೀಡಿಯೋ ವೈರಲ್ ಆಗಿದೆ.
ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ .ಈ ಸಂಬಂಧ ಅನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಹೊಟ್ಟೆ ನೋವೆಂದು ಪತಿ ಜೊತೆ ಮಹಿಳೆ ಸ್ಕ್ಯಾನಿಂಗ್ ಸೆಂಟರ್ ಗೆ ಹೋಗಿದ್ದಳು. ಸ್ಕ್ಯಾನಿಂಗ್ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಮಹಿಳೆ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ . ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಘಟನೆ ಬಳಿಕ ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

