ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗೀಜಿಹಳ್ಳಿ ಬಳಿ ನಡೆದಿದೆ.
ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಡಿಕೇರಿಕಡೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅರಸಿಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
