BIG NEWS: ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಮರು ಮತದಾನವಿಲ್ಲ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಗೆಲುವಿನತ್ತ ಧಾಪುಗಾಲಿಟ್ಟಿದೆ. ಈನಡುವೆ ಬಿಹಾರದಲ್ಲಿ ಇದೇ ಮೊದಲ ಬಾರಿಗೆ ಮರುಮತದಾನವಿಲ್ಲ ಎಂದು ತಿಳಿದುಬಂದಿದೆ.

ಬಿಹಾರ ವಿಧಾನಸಭಾ ಚುನಾವಣೆಯ ದಿನದಂದು ಯಾವುದೇ ಸಾವು ಸಂಭವಿಸಿಲ್ಲ ಮತ್ತು ಯಾವುದೇ ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶವಿಲ್ಲ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಹಿಹಾರದಲ್ಲಿ ವ್ಯಾಪಕ ಹಿಂಸಾಚಾರ, ಸಾವು ಮತ್ತು ಮರುಚುನಾವಣೆಗಳಿಗೆ ಸಾಕ್ಷಿಯಾಗಿತ್ತು.

ಬಿಹಾರದಲ್ಲಿ 1985, 1990, 1995, 2005ರಲ್ಲಿ ನಡೆದ ಚುನಾವಣೆಯಲ್ಲಿ ಭಾರಿ ಹಿಂಸಾಚಾರ, ಸಾವು-ನೋವು ಕೊಲೆಗಳು ಸಂಭವಿಸಿದ್ದವು. ಈಗ 2025ರಲ್ಲಿ ಎರಡು ಹಂತಗಳಲ್ಲಿ ಬಿಹಾರದಲ್ಲಿ ಮತದಾನ ನಡೆದಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಹಿಂಸಾಚಾರ, ಸಾವು-ನೋವು ಪ್ರಕರಣ ವರದಿಯಾಗಿಲ್ಲ. ಹಾಗಾಗಿ ಮರುಮತದಾನದ ಆದೇಶವಿಲ್ಲ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read