BREAKING: ಬಿಹಾರ ಜನತೆ ಜಂಗಲ್ ರಾಜ್ ಸರ್ಕಾರಕ್ಕೆ ಅವಕಾಶ ನೀಡಿಲ್ಲ, ವಿಪಕ್ಷಗಳು ಧೂಳೀಪಟವಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಬಿಹಾರದ ಜನರಿಗೆ ಹೃದಯಪೂರ್ವಕ ಧನ್ಯವಾದಗಳು, ಬಿಹಾರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ. ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಹಾರದ ಜನತೆ ಎನ್.ಡಿ.ಎ. ಮೈತ್ರಿಕೂಟಕ್ಕೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಬಿಹಾರ ಚುನಾವಣೆಯಲ್ಲಿ ವಿಪಕ್ಷಗಳು ಧೂಳಿಪಟವಾಗಿವೆ. ನಾವು ಜನತಾ ಜನಾರ್ಧನರ ಸೇವಕರು. ಬಿಹಾರ ಜನತೆ ಜಂಗಲ್ ರಾಜ್ ಸರ್ಕಾರಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

ನಾನು ಬಿಹಾರ ಚುನಾವಣೆಯಲ್ಲಿ ಜಂಗಲ್ ರಾಜ್ ಮತ್ತು ಕಟ್ಟಾ ಸರ್ಕಾರ್ ಬಗ್ಗೆ ಮಾತನಾಡುತ್ತಿದ್ದಾಗ, ಆರ್‌ಜೆಡಿ ಪಕ್ಷ ಯಾವುದೇ ಆಕ್ಷೇಪಣೆಗಳನ್ನು ವ್ಯಕ್ತಪಡಿಸಲಿಲ್ಲ. ಆದಾಗ್ಯೂ, ಇದು ಕಾಂಗ್ರೆಸ್ ಅನ್ನು ಅಸಮಾಧಾನಗೊಳಿಸಿತು. ಬಿಹಾರದ ಜನರು ವಿಕಸಿತ್ ಬಿಹಾರಕ್ಕೆ ಮತ ಹಾಕಿದ್ದಾರೆ. ನಾವು ಜನರ ಸೇವಕರು. ನಾವು ನಮ್ಮ ಕಠಿಣ ಪರಿಶ್ರಮದಿಂದ ಜನರನ್ನು ಸಂತೋಷಪಡಿಸುತ್ತಲೇ ಇರುತ್ತೇವೆ ಮತ್ತು ನಾವು ಜನರ ಹೃದಯಗಳನ್ನು ಗೆದ್ದಿದ್ದೇವೆ. ಅದಕ್ಕಾಗಿಯೇ ಇಡೀ ಬಿಹಾರ ‘ಫಿರ್ ಏಕ್ ಬಾರ್ ಎನ್‌ಡಿಎ ಸರ್ಕಾರ್’ ಎಂದು ಹೇಳಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read